ಬೆಂಗಳೂರು : ಕರ್ನಾಟಕದ ಸದನದಲ್ಲಿ ಬಹಳ ಕಡಿಮೆ ಬಾರಿ ಅಮಾನತುಗಳಾಗಿವೆ. ಮೊನ್ನೆ ದುರ್ಬೀನು ಹಾಕಿಕೊಂಡು ಹುಡುಕಿದರೆ ಸಿಗುವಷ್ಟು ಚಿಕ್ಕ ವಿಷಯಕ್ಕೆ 10 ಬಿಜೆಪಿ ಶಾಸಕರ ಅಮಾನತು ಘಟನೆ ನಡೆದಿದೆ. ಇದು ಅಕ್ಷಮ್ಯ ಕ್ರಮ ಎಂದು ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ `ಸಿಟಿಜನ್ಸ್ ಫಾರ್ ಡೆಮಾಕ್ರೆಸಿ’ ವತಿಯಿಂದ ನಗರದ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಶಾಸಕರ ಅಮಾನತು ಒಂದು ಚರ್ಚೆ ಕಾರ್ಯಕ್ರಮದಲ್ಲಿ ವಿಶ್ವೇಶ್ವರ