ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಡಿಯಾಲ ಮತ್ತು ಚಂಗೌಡನಹಳ್ಳಿಗೆ ಹೋಗುವ ರಸ್ತೆಯ ಪಕ್ಕದ ಜಮೀನೊಂದರಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. ಸಾವಿಗೆ ನಿಕರವಾದ ಮಾಹಿತಿ ತಿಳಿದು ಬಂದಿಲ್ಲ. ಅಲ್ಲಲ್ಲಿ ಚಿರತೆಯ ಹೆಜ್ಜೆಯ ಗುರುತು ಇರುವುದರಿಂದ ಅನುಮಾನ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬರುತ್ತಿದ್ದು, ಸಾರ್ವಜನಿಕರ ನಿದ್ರೆಗೆಡಿಸಿದ್ದು, ರೈತರು, ಮಹಿಳೆಯರು ಭಯಭೀತರಾಗಿ ಜಮೀನುಗಳಿಗೆ ತೆರಳಲು ಇಂದೇಟು ಹಾಕುತ್ತಿದ್ದಾರೆ.ಆದರೆ ಈ ಚಿರತೆ