ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಿಂಗಾಯತ ಸ್ವಾಮೀಜಿಯನ್ನು ಕಣಕ್ಕಿಳಸಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ. ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಪ್ರಾಬಲ್ಯ ಹೊಂದಿದ್ದಾರೆ. ಲಿಂಗಾಯತ ಮತಗಳು ಈ ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವುದರಿಂದ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರನ್ನು ಚುನಾವಣೆಗೆ ಅಭ್ಯರ್ಥಿಯನ್ನಾಗಿಸಲು ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ. ಈಗಾಗಲೇ ಸಚಿವ ರಮೇಶ ಜಾರಕಿಹೊಳಿ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ್ದು, ಟಿಕೆಟ್