ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಸಂಡೂರಿನ ಕುಮಾರಸ್ವಾಮಿ ದೇವಾಲಯದ ತಂಟೆಗೆ ಬರಬೇಡಿ ಅಂತಾ ರಂಭಾಪುರಿ ಪೀಠದ ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.ಸುಂಕ್ಲಮ್ಮ ದೇವಾಲಯವನ್ನು ಕೆಡವಿ ಗಣಿಗಾರಿಕೆ ಮಾಡಿದ್ದಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅನುಭವಿಸಬಾರದ ಕಷ್ಟ ಅನುಭವಿಸುತ್ತಿದ್ದಾರೆ. 10 ನೇ ಶತಮಾನದಲ್ಲಿ ನಿರ್ಮಾಣವಾಗಿರುವ ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದ ಸುತ್ತ ಗಣಿಗಾರಿಕೆಗೆ ಅವಕಾಶ ಕಲ್ಪಿಸಿರುವುದು ಸರಿಯಲ್ಲ, ನೀವು ಕೂಡ ಕಷ್ಟ ಅನುಭವಿಸಬೇಕಾಗುತ್ತದೆ