ತಹಸೀಲ್ದಾರ್ ಹಾಗೂ ಇಬ್ಬರು ಸರಕಾರಿ ಆಸ್ಪತ್ರೆಯ ವೈದ್ಯರಿಗೆ ಕೊರೊನಾ ತಗುಲಿದೆ. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ ತಾಲ್ಲೂಕು ತಹಶೀಲ್ದಾರ್, ದಿನಪತ್ರಿಕೆಯ ಜಾಹೀರಾತು ಪ್ರತಿನಿಧಿ, ಸರ್ಕಾರಿ ಆಸ್ಪತ್ರೆಯ ಇಬ್ಬರು ಶುಶ್ರೂಷಾಧಿಕಾರಿಗಳು ಸೇರಿದಂತೆ ಒಟ್ಟು 54 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಜಿಲ್ಲೆಯಲ್ಲಿ ಈವರೆಗೆ 459 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. 292 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 11 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.156 ಪ್ರಕರಣಗಳು ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ