ಬೆಂಗಳೂರು : ನಿಮಗೆ ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ. ಆರ್ಎಸ್ಎಸ್ನ ಯುವಕರ ದಳ ಭಜರಂಗದಳ. ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟಿದೆ ಕಾಂಗ್ರೆಸ್. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು