ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಮಾತನಾಡಿದ ಎನ್ನುವ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೈದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಹಲ್ಲೆಗೊಳ್ಳಗಾದ ವಿದ್ಯಾರ್ಥಿಯನ್ನು ರಾಂಚಿ ಮೂಲದ ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ಉಳ್ಳಾಲದಿಂದ ಮಂಗಳೂರು ನಡೆಗೆ ಪ್ರಯಾಣಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಬಸ್ ಅಬ್ಬಕ್ಕ ವೃತ್ತದ ಬಳಿ ನಿಂತ ವೇಳೆ ಪರಿಚಯಸ್ಥ ಯುವತಿಯೊಂದಿಗೆ ರಾಹುಲ್