ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿಗಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ. ಈ ಕುರಿತು ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ. ತಮಿಳುನಾಡು