ನೈತಿಕತೆಯಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೃಶ್ಯ ಮಾಧ್ಯಮದಲ್ಲಿ ತನ್ವೀರ್ ಸೇಠ್ ಅರೆನಗ್ನ ಚಿತ್ರಗಳನ್ನುನೋಡುತ್ತಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಹಾಗಿದ್ದಾಗಲೂ ಸೇಠ್ ತಾನೇನೂ ತಪ್ಪೇ ಮಾಡಿಲ್ಲ ಎಂದು ಸಮರ್ಥಿಕೊಳ್ಳುತ್ತಿದ್ದಾರೆ. ಅವರಿಗೆ ಬೆಂಬಲವಾಗಿ ಇನ್ನಿತರ ಕಾಂಗ್ರೆಸ್ ಮುಖಂಡರು ನಿಂತಿದ್ದಾರೆ. ಇದು ಸಭ್ಯ ರಾಜಕಾರಣವಾಗಿದ್ದು, ಸಾರ್ವಜನಿಕರು ತಲೆ