ಟಿಪ್ಪು ಜಯಂತಿ ವೇಳೆ ಅರೆನಗ್ನ ಚಿತ್ರ ವೀಕ್ಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟಿವಿ ಮಾಧ್ಯಮಗಳಲ್ಲಿ ಬಿತ್ತರವಾಗಿರುವುದು ಸಳ್ಳು ಸುದ್ದಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಡೆದ ಘಟನೆಯ ಬಗ್ಗೆ ವರದಿ ನೀಡುವಂತೆ ಆದೇಶಿಸಿದ್ದೇನೆ. ವರದಿ ಬಂದ ನಂತರ ಒಂದು ವೇಳೆ ಸಚಿವ ತನ್ವೀರ್ ಸೇಠ್ ತಪ್ಪು ಮಾಡಿದ್ದಲ್ಲಿ ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇನೆ