ಸಾಹಿತ್ಯ ಆಸಕ್ತರು ಹಾಗೂ ಸಿನಿಪ್ರಿಯರ ಗಮನ ಸೆಳೆದ ‘ಡೇರ್ಡೆವಿಲ್ ಮುಸ್ತಫಾ’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಚಿತ್ರ ನೋಡಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ‘ಡೇರ್ಡೆವಿಲ್ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ