ಬೆಂಗಳೂರು : 2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ.ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ.ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ