ಹುಬ್ಬಳ್ಳಿ : ಪೊಲೀಸ್ ತನಿಖೆ ವ್ಯವಸ್ಥೆಯಲ್ಲಿ ಇನ್ನೂ ತಾಂತ್ರಿಕ ಬದಲಾವಣೆ ತಂದು ಅಪರಾಧಿಗಳಿಗೆ ಶೀಘ್ರವಾಗಿ ಶಿಕ್ಷೆ ಆಗುವಂತಾಗಬೇಕೆಂದು ಮಾಜಿ ಸಿಎಂ ಶಾಸಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ವಿಧಿವಿಜ್ಞಾನ ಪ್ರಯೋಗಲಾಯದ ವರದಿಗಳು ವಿಳಂಬವಾಗುತ್ತಿದ್ದ ಕಾರಣಕ್ಕೆ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ನ್ಯಾಯದಾನ ಮಾಡುವುದು ಕಷ್ಟವಾಗುತ್ತಿತ್ತು. ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಅನೇಕ ಪ್ರಕರಣಗಳು ವಿಲೇಯಾದ