ನಿಯಮ ಬಾಹಿರವಾಗಿ ಮತ್ತು ಅಧಿಕಾರ ವ್ಯಾಪ್ತಿ ಮೀರಿ ಕೆಲಸ ಮಾಡಿದ ತಹಸೀಲ್ದಾರ್ ಒಬ್ಬರು ಸೇವೆಯಿಂದ ಅಮಾನತ್ ಆಗಿದ್ದಾರೆ. ನಿಯಮ ಬಾಹಿರ ಹಾಗೂ ಅಧಿಕಾರ ವ್ಯಾಪ್ತಿ ಮೀರಿ ಖಾತಾ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ನಾಡ ಕಚೇರಿಯ ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹೀಗಂತ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ಭೂ ಕಂದಾಯ ನಿಯಮಗಳು 1966