ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವುದು ಕೊನೆಗೂ ಫೈನಲ್ ಆಗಿದೆ. ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್ ನೀಡಿರುವುದು ಕಾರ್ಯಕರ್ತರನ್ನು ಅಚ್ಚರಿಯ ಜತೆಗೆ ಅಸಮಾಧಾನಕ್ಕೆ ದೂಡಿದೆ.ಇಲ್ಲಿ ಇದುವರೆಗೆ ದಿವಂಗತ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಗೇ ಟಿಕೆಟ್ ಸಿಗಬಹುದು ಎಂಬುದು ಬಿಜೆಪಿಯ ಕೆಲವು ಕಾರ್ಯಕರ್ತರ ನಿರೀಕ್ಷೆಯಾಗಿತ್ತು. ಆದರೆ ತೇಜಸ್ವಿನಿಗೆ ಟಿಕೆಟ್ ಕೊಡುವುದಕ್ಕೆ ಆರ್. ಅಶೋಕ್ ಸೇರಿದಂತೆ ಕೆಲವು