ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಮಾಡುವುದಕ್ಕೆ ಕೆಲಸ ಇಲ್ಲ. ಫೇಕ್ ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ.ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ.