ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿನಿ ಅನಂತಕುಮಾರ್ ಸ್ಪರ್ಧಿಸುವುದು ಖಚಿತಗೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಯಶಸ್ಸಿಗಾಗಿ ಸುತ್ತೂರು ಶ್ರೀಗಳಿಗೆ ಭೇಟಿ ಮಾಡಿ ಆಶೀರ್ವಾದ ಪಡೆದರು.ಅನಂತಕುಮಾರ್ ಸಾವಿನ ನಂತರ ಅವರ ಪತ್ನಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿಯಾಗಿರುವ ತೇಜಸ್ವಿನಿ