ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ದೇವಾಲಯಕ್ಕೆ ಆಗಮಿಸಲಿರುವ ಮೋದಿಯವರು, ಮಂಜುನಾಥ ದೇವರಿಗೆ ರುದ್ರಾಭೀಷೇಕ ಮಾಡಿಸಲಿದ್ದಾರೆ. ನಂತರ ಅಣ್ಣಪ್ಪ ದೇವರ ದರ್ಶನ ಪಡೆಯಲಿದ್ದಾರೆ. ಇದಾದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಚರ್ಚೆ ನಡೆಸಿ ಅಲ್ಲಿಂದ ಉಜಿರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಭದ್ರತಾ ದೃಷ್ಟಿಯಿಂದ ಸಿಬ್ಬಂದಿ ಬೆಳಗ್ಗೆಯಿಂದಲೇಧರ್ಮಸ್ಥಳ ಮಂಜುನಾಥ ದೇವಾಲಯದ ಸುತ್ತ ಭದ್ರತಾ ಕಾರ್ಯ ಚುರುಕುಗೊಳಿಸಿದ್ದಾರೆ. ಭಕ್ತರಿಗೆ ದೇವಾಲಯ ಪ್ರವೇಶ ನಿಷೇಧಿಸಿದೆ.