ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಯಡಿಯೂರಪ್ಪ, ತೇರದಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿ ಮುಖಂಡ ಸಿದ್ದು ಸವದಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸವದಿಗೆ ವಿಧಾನಪರಿಷತ್ ಸ್ಥಾನ ನೀಡುವ ಭರವಸೆಯೊಡ್ಡಲಾಗಿದೆ ಎನ್ನಲಾಗಿದೆ. ತೇರದಾಳ ಕ್ಷೇತ್ರದಲ್ಲಿ ಲಿಂಗಾಯುತರು ಮತ್ತು ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಯಡಿಯೂರಪ್ಪ ತೇರದಾಳ ಕ್ಷೇತ್ರದತ್ತ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.