ಶಿವಮೊಗ್ಗ : 2 ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಬಸ್ಗಳಲ್ಲಿದ್ದ 34 ಪ್ರಯಾಣಿಕರು ಗಾಯಗೊಂಡಿರುವ ಭೀಕರ ಘಟನೆ ಶಿವಮೊಗ್ಗದ ಚೋರಡಿ ಸಮೀಪ ನಡೆದಿದೆ. ಚೋರಡಿ ಸಮೀಪದ ಕುಮುದ್ವತಿ ಸೇತುವೆ ಮೇಲೆ ಶಿವಮೊಗ್ಗದಿಂದ ಆಯನೂರು ಮಾರ್ಗವಾಗಿ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಅಪಘಾತದ ರಭಸಕ್ಕೆ ಎರಡು ಬಸ್ಗಳ ಮುಂಭಾಗ ಸಂಪೂರ್ಣ