ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ KSRTC ಬಸ್ ನಡುವೆ ಭೀಕರ ಅಪಘಾತವಾಗಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಬಾಣವಾರದ ಗಾಂಧಿನಗರದಲ್ಲಿ ನಡೆದಿದೆ. ಫರಿಣಾಮ ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಹಳ್ಳಿಕೆರೆ ಗ್ರಾಮದ 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ