ಮಂಡ್ಯ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೇಮಂತ್, ಶರತ್, ನವೀನ್ ಹಾಗೂ ಇನ್ನೋರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ