ಚಿತ್ರದುರ್ಗ : ಇಲ್ಲಿನ ಪ್ರವಾಸಿ ಮಂದಿರ ಬಳಿ ರೋಡ್ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಈ ಭೀಕರ ಅಪಘಾತ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಗಾಯಾಳುಗಳಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.