ದೇಶದ ವಾಣಿಜ್ಯ ನಗರಿಯಾದ ಮುಂಬೈನಲ್ಲಿ ದಾಳಿ ನಡೆಸುವ ಬಗ್ಗೆ ಉಗ್ರರು ಸಂಚು ರೂಪಿಸಿರುವುದು ಬಹಿರಂಗವಾಗಿದೆ. ಕೆಲ ಉಗ್ರರು ಮುಂಬೈನಲ್ಲಿ ಅಡಗಿದ್ದು ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎನ್ನುವ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಪೊಲೀಸರು, ನಗರದಾದ್ಯಂತ ಭಾರಿ ಪ್ರಮಾಣದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿತ ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಿದ್ದತೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಉಗ್ರರಿಂದ ಮಾಹಿತಿ ಪಡೆದ