ಭಯೋತ್ಪಾದನೆಯನ್ನು ಅಥವಾ ಭಯೋತ್ಪಾದನೆಯ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತಲೂ ಅಪಾಯಕಾರಿ. ಹಾಗಾಗಿ ಭಯೋತ್ಪಾದನಾ ಚಟುವಟಿಕೆಗಳನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಜನಾಂಗದ ಗುಂಪಿಗೆ ಹೋಲಿಸಬಾರದು ಎಂದು ಹೇಳಿದ್ದಾರೆ. ಭಯೋತ್ಪಾದನೆಗೆ ಹಣಕಾಸು ಒದಗಿಸುವುದು