ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಪರಿಷ್ಕರಿಸಿರುವ ಪಠ್ಯ ಪುಸ್ತಕ ರದ್ದು ಆಗ್ರಹಿಸಿ ಶನಿವಾರ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ದ ಒಕ್ಕೊರಲಲ್ಲಿ ಅಗ್ರಹಿಸಿದವು. ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದು ಪರಿಷ್ಕೃತ ಪಠ್ಯವನ್ನ ಹಿಂಪಡೆಯುವಂತೆ ಆಗ್ರಹಿಸಿ ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ದ ಒಕ್ಕೊರಲ ಧ್ವನಿ ಮೊಳಗಿಸಿವೆ. ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.