ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವರದಿ ನೀಡಲು ಶಿಕ್ಷಣ ಸಚಿವರಿಗೆ ತಿಳಿಸಲಾಗಿದೆ. ಪ್ರಕರಣದ ಎಲ್ಲ