ಯುವ ಬಂಜಾರ ಸಂಘದ ವತಿಯಿಂದ ತಾಂಡಾಗಳ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಪಾವಗಡ ತಾಲ್ಲೂಕಿನ ಲಂಬಾಣಿ ತಾಂಡಾಗಳ ಮತ್ತು ಸಮಾಜದ ಅಭಿವೃದ್ಧಿಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ಅರೋಪಿಸಿ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಯುವ ಬಂಜಾರ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಪ್ರಮುಖರಾದ ಗೋವಿಂದ ನಾಯ್ಕ ಮಾತನಾಡಿ, ಪಾವಗಡ ತಾಲ್ಲೂಕಿನಲ್ಲಿ 29 ತಾಂಡಾಗಳಿವೆ. 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ನಮ್ಮ ಆರಾಧ್ಯ ದೈವ ಸೇವಾ ಲಾಲ್