ಜಿಲ್ಲೆಯಲ್ಲಿ ಬೇಸಿಗೆಯೋ ಮಳೆಗಾಲವೋ ಅನ್ನೋದೆ ತಿಳಿಯುತ್ತಿಲ್ಲ. ಆ ಮಟ್ಟಿಗೆ ವರುಣನ ಆರ್ಭಟ ಶುರುವಾಗಿದೆ. ವಿಪರ್ಯಾಸ ಅಂದ್ರೆ ಒಂದೆಡೆ ಅಕಾಲಿಕ ಮಳೆಗೆ ರೈತರ ಬೆಳೆ ನಾಶವಾದರೆ ಇತ್ತ ಸಿಡಿಲಿನ ಹೊಡೆತಕ್ಕೆ ಜೀವಗಳೇ ಬಲಿಯಾಗಿವೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಸೇರಿ ತಾಲೂಕಿನಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಜೊತೆಗೆ ಸಿಡಿಲಿನ ಅಬ್ಬರಕ್ಕೆ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿ ನಿಲ್ಲಿಸಿಕೊಂಡಿದ್ದ ಕುರಿಗಾಯಿ ಸಹೋದರರಿಬ್ಬರು ಸಿಡಿಲಿನ ಹೊಡೆತಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾರೆ.