ಬೆಂಗಳೂರು : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಮಾಣೆಕ್ಯ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಧ್ವಜಾರೋಹಣ ನೇರವೇರಿಸಿದ್ದಾರೆ.ಇಂದು ಬೆಳಿಗ್ಗೆ 9 ಗಂಟೆಗೆ ಮಾಣೆಕ್ಯ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಧ್ವಜಾರೋಹಣ ನೇರವೇರಿಸಿದ್ದಾರೆ. ಬಳಿಕ ರಾಜ್ಯಪಾಲರಿಂದ ಗೌರವವಂದನೆ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಉತ್ತಮ ಆಡಳಿತದಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ.