ಎಟಿಎಂಗಳಿಗೆ ಕನ್ನ ಹಾಕಿ ಹಣ ದೋಚುತ್ತಿದ್ದ ಕಿಲಾಡಿ ಜೋಡಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಎರಡು ತಿಂಗಳ ಹಿಂದೆ ಉತ್ತರ ಕನ್ನಡದ ಶಿರಸಿಯ ದಾಸನಕೊಪ್ಪದಲ್ಲಿ ಇಂಡಿಯನ್ ಒವರ್ಸೀಸ್ ಬ್ಯಾಂಕ್ ನ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ.ಬದನಗೋಡಿನ ಸಂತೋಷ ಬೋವಿವಡ್ಡರ್ (21), ಇಟಗುಳಿ ಕಲಕೊಪ್ಪದ ಮುನ್ನಾಸಾಬ್ ದಾವುದ್ಸಾಬ್ (32) ಬಂಧಿತ ಆರೋಪಿಗಳಾಗಿದ್ದಾರೆ.ಸಿಪಿಐ ಬಿ. ಗಿರೀಶ ನೇತೃತ್ವದಲ್ಲಿ ತನಿಖಾಧಿಕಾರಿ ಚಂದ್ರಶೇಖರ ಹರಿಹರ ತನಿಖೆ ಕೈಗೊಂಡಿದ್ದರು. ಆರೋಪಿಗಳ