ಬೆಳಗಾವಿ|
pavithra|
Last Modified ಬುಧವಾರ, 7 ಏಪ್ರಿಲ್ 2021 (12:55 IST)
ಬೆಳಗಾವಿ : ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಮಾತುಕತೆಗೆ ಬರುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಮಾ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದ್ದೇವೆ. ಆದ್ರೂ ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಇದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ. ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಮಾತುಕತೆಗೆ ಬರಲಿ, ಆಗ ನಾವು ಯಾರ ಜೊತೆಯಾದರೂ ಮಾತನಾಡಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.