ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿ

ಬೆಂಗಳೂರು| pavithra| Last Updated: ಗುರುವಾರ, 19 ಡಿಸೆಂಬರ್ 2019 (06:37 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಇಂದು ಬೆಳಿಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಆದಕಾರಣ ಈ ಮೂರು ದಿನಗಳ ಕಾಲ ಯಾವುದೇ ಪ್ರತಿಭಟನೆ, ಮೆರವಣೆಗೆ ಮಾಡುವಂತಿಲ್ಲ . ಸಿಎಂ ಪರ ವಿರೋಧ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಹಾಗೇ ಶಾಲಾ-ಕಾಲೇಜು, ಹೂ , ತರಕಾರಿ, ಹಣ್ಣಿನ ಮಾರುಕಟ್ಟೆ, ಬಸ್ ಗಳು ಹಾಗೂ ಆಟೋಗಳಿಗೆ ಎಂದಿನಂತೆ ತಮ್ಮ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :