ಚಲಿಸುತ್ತಿದ್ದ ಬೈಕ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.ಸಂಕೇಶ್ವರ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಎದುರು ಘಟನೆ ನಡೆದಿದೆ.ಚಲಿಸುತ್ತಿರುವಾಗಲೇ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೈಕ್ ಸವಾರ ಬೈಕ್ ನಿಲ್ಲಿಸಿ ಕೆಳಗೆ ಇಳಿಯುತ್ತಿದ್ದಂತೆ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬೈಕ್ ಸುಟ್ಟು ಕರಕಲಾಗಿದೆ.ಸ್ಥಳೀಯರು ಬೈಕ್ ಗೆ ಹತ್ತಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ್ರು.