ಸರ್ಕಲ್ ವೊಂದರಲ್ಲಿ ನಿಲ್ಲಿಸಲಾಗಿದ್ದ ಬೈಕ್ ಮುಟ್ಟಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ನಡೆಯಬಾರದ ಘಟನೆ ನಡೆದಿದೆ. ಬೈಕ್ ಮುಟ್ಟಿದ ಕಾರಣಕ್ಕೆ ಕಾಶೀನಾಥ ತಳವಾರ ಎಂಬಾತನ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದೆ.ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ಮುಟ್ಟಿ ಮಲೀನ ಮಾಡಿದ್ದಾಗಿ ಆರೋಪಿಸಿ ಹಲ್ಲೆ ನಡೆಸಲಾಗಿದೆ.ತಾಳಿಕೋಟೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.