ಬೆಂಗಳೂರು : ಅತೃಪ್ತರನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರ ರಚನೆ ಮಾಡಬೇಕೆಂದುಕೊಂಡಿದ್ದ ಬಿಜೆಪಿಗೆ ಅತೃಪ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಮುನ್ನವೇ ವಿಘ್ನವೊಂದು ಎದುರಾಗಿದೆ. ಅತೃಪ್ತ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ತೀವ್ರ ವಿರೋಧ ವ್ಯಕ್ತವಾಗಿದೆ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ಮಾಜಿ ಮೇಯರ್ ಎಸ್. ಹರೀಶ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ