ಸಿಎಂ ಸ್ವಕ್ಷೇತ್ರದಿಂದಲೇ ಪ್ರಾರಂಭಗೊಂಡ ಬಿಜೆಪಿ ಪಾದಯಾತ್ರೆ. ರಾಜ್ಯ ರೈತರ ಸಂಪೂರ್ಣ ಸಾಲಮನ್ನಾಕ್ಕಾಗಿ ಬಿಜೆಪಿ ಕಾಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ, ರೈತರು ಭಾಗವಹಿಸುವ ಮೂಲಕ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಜಿಲ್ಲೆಯ ಸ್ಥಳೀಯ ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿ ಪಾದಯಾತ್ರೆ ಆರಂಭಗೊಂಡಿದ್ದು ಜಿಲ್ಲಾ ಬಿಜೆಪಿಯಲ್ಲಿನ ಗೊಂದಲವನ್ನ ಸಾರುತಿತ್ತು.ಮೂರುದಿನಗಳ ಕಾಲ ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ಚನ್ನಪಟ್ಟಣದ ಕೆಂಗಲ್ ಆಂಜನೇಯ ದೇವಾಲಯದಿಂದ ಬೆಂಗಳೂರಿನ