ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ. ತಳ ಮಟ್ಟದಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಈ ಸಮಾವೇಶ ಉದ್ಘಾಟಿಸಲಿದ್ದಾರೆ .ಇನ್ನೇನು ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ .ಈ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ವಹಿಸಲಾಗಿದೆ. ಮಾ. 9ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ನಾಲ್ಕು ಜಿಲ್ಲೆಗಳ