ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕೊಟ್ಟಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನೀರಸ ಸ್ಪಂದನೆ ನಡುವೆ ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. ಬಿಸಿಯೂಟ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ನೌಕರರು ಹಾಗೂ ಎಸ್ ಎಫ್ ಐ ವಿದ್ಯಾರ್ಥಿ ಫೆಡರೇಶನ್ ಸೇರಿದಂತೆ ಅನೇಕ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ಸಿದ್ದಪ್ಪ ಸರ್ಕಲ್ ವರೆಗೂ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆಯನ್ನು ನಡೆಸಿದ್ರು.ಸಾವಿರಾರು ಕಾರ್ಮಿಕರು ಮೆರವಣಿಗೆಯಲ್ಲಿ