ಬ್ರಿಟನ್ ಇಂದು ಭಾರೀ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಬ್ರಿಟನ್ ದೇಶ ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆ ಎಂದು ಆ ದೇಶದ ವಿತ್ತ ಸಚಿವ ಜೆರೆಮಿ ಹಂಟ್ ಘೋಷಿಸಿದ್ದಾರೆ. ಇದೀಗ ದೇಶವನ್ನು ಆರ್ಥಿಕ ಹಿಂಜರಿತದಿಂದ ಮೇಲೆತ್ತಲು ತೆರಿಗೆ ಹೆಚ್ಚಳ ಮತ್ತು ವೆಚ್ಚ ಕಡಿತದ ನಿರ್ಧಾರವನ್ನು ರಿಷಿ ಸುನಕ್ ಸರ್ಕಾರ ಪ್ರಕಟಿಸಿದೆ. ಹದಗೆಟ್ಟಿರುವ ಸಾರ್ವಜನಿಕ ಹಣಕಾಸು ವ್ಯವಸ್ಥೆಗೆ ಪುನಶ್ಚೇತನ ನೀಡಲು 66 ಶತಕೋಟಿ ಡಾಲರ್ ಮೊತ್ತದ ವಿತ್ತೀಯ ಯೋಜನೆಯನ್ನು ಘೋಷಿಸಿದೆ. ಸಾರ್ವಜನಿಕ ವೆಚ್ಚ ನಿಯಂತ್ರಣ