ಬೆಂಗಳೂರು : ಡಿಸೆಂಬರ್ 5ರಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ಘೋಷಣೆಯಾದ ಹಿನ್ನಲೆಯಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ಅಂತಿಮ ತೆರೆ ಎಳೆಯಲಾಗುತ್ತಿದೆ.ಅನರ್ಹ ಶಾಸಕರ ರಾಜೀನಾಮೆಯಿಂದ ತೆರನಾದ 15 ಕ್ಷೇತ್ರಗಳ ಉಪಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣೆಗೆ 2 ದಿನ ಬಾಕಿ ಇದ್ದು, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಆದಕಾರಣ ಇಂದು ಪಕ್ಷದ ಪ್ರಬಾವಿ ನಾಯಕರು ತಮ್ಮ ಅಭ್ಯರ್ಥಿ ಪರ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.