ಬೆಂಗಳೂರು : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಹೀಗಾಗಿ ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು. ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತೊಂದು ಟ್ವೀಟ್ ಮಾಡಿರುವ ಅವರು, ಪ್ರವಾಹ ಪರಿಸ್ಥಿತಿ ಸಮೀಕ್ಷೆಗೆ ಕೇಂದ್ರದ ತಂಡ ಆಗಮಿಸಿದೆ. ಪ್ರವಾಹದಿಂದಾಗಿ ಸುಮಾರು