ರಸ್ತೆ ಪಕ್ಕದ ಬ್ರಿಡ್ಜ್ ತಡೆಗೋಡೆಗೆ ಕಾರ್ ಡಿಕ್ಕಿ ಹೊಡೆದರೂ ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದರು ಪಾರಾಗಿದ್ದಾರೆ.ಡಿಕ್ಕಿ ರಭಸಕ್ಕೆ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ ಕಾರ್. ಬೆಳಗಾವಿಯ ಕಿತ್ತೂರು ತಾಲೂಕಿನ ಕುರುಬರ ತೆಗ್ಗಿನ ಬಳಿ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ನಡೆದ ಘಟನೆ ನಡೆದಿದೆ.ಬೆಳಗಾವಿ ಕಡೆ ಸಾಗುತ್ತಿದ್ದ ಕಾರ್ ಇಕ್ಕಟ್ಟಾದ ರಸ್ತೆ, ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಅಂಬುಲೇನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.