ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಭೇಟಿಯಾಗಿ ಕೊರೊನಾ ನಿರ್ವಹಣೆ ಬಗ್ಗೆ ಚರ್ಚೆ ಮಾಡಿದ್ದೇನೆ. ಕೊರೊನಾ ನಿರ್ವಹಣೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ವ್ಯಾಕ್ಸಿನೇಷನ್ ಹೆಚ್ಚು ಮಾಡಲು ಸೂಚಿಸಿದ್ದಾರೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರದ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವರ ಭೇಟಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ನಾಯಕ ಭೇಟಿ ಬಳಿಕ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ಕೇಂದ್ರ ಸರ್ಕಾರ