ರೈತ ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದಿದ್ದಾಗ ಕೃಷಿ ಉತ್ಪನ್ನಗಳ ಧಾರಣೆಯ ಸ್ಥಿರಿಕರಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರ ಕೃಷಿ ಉತ್ಪನ್ನದ ಮಾರ್ಕೆಟ್ ಸಪ್ರ್ಲಸ್ನ ಶೇ.25ರಷ್ಟು ಪ್ರಮಾಣ ಮಾತ್ರ ಬೆಂಬಲ ಬೆಲೆಯಲ್ಲಿ ಖರೀದಿಸಲು ಸಾಧ್ಯವಿದೆ. ರೈತರು ಬೆಳೆದ ಒಟ್ಟಾರೆ ಪ್ರಮಾಣವಲ್ಲ ಎಂಬ ಸ್ಪಷ್ಠನೆಯನ್ನು ರೈತರಿಗೆ ಸಮರ್ಪಕವಾದ ಮಾಹಿತಿ ಕೊಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್.ಪ್ರಕಾಶ ಕಮ್ಮರಡಿ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.