ಮೈತ್ರಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ನಾನು ಬೆಗ್ಗರ್ಸ್ ಅಂತಾ ಹೇಳಿದ್ದು ನಿಜ. ಆದರೆ ನಮ್ಮನ್ನು ಗೌರವಯುತವಾಗಿ ನಡೆಸಿ ಅಂತ ಮನವಿ ಮಾಡಿದ್ದೆ ಅಷ್ಟೆ ಎಂದು ಸಿಎಂ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಬೆಗ್ಗರ್ಸ್ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಯಾರನ್ನೂ ಬೊಟ್ಟು ಮಾಡಿ ಆ ಪದ ಹೇಳಿಲ್ಲ. ಸಮನ್ವಯ ಸಾಧಿಸಿಕೊಂಡು ಹೋಗಬೇಕೆಂದು ಮನವಿ ಮಾಡಿದ್ದೆ. ಆದರೆ ನನ್ನ ಹೇಳಿಕೆಯನ್ನು ಸಂಪೂರ್ಣವಾಗಿ ಪ್ರಸಾರ ಮಾಡಿಲ್ಲ.