ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಿಂದ ಮಾಗಡಿ ರಸ್ತೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲನೆ ನಡೆಸಿದರು. ಮಾಗಡಿ ರಸ್ತೆ ಬಳಿಯ ವಾರ್ಡ್ ರಸ್ತೆಗಳಲ್ಲಿ ಡಾಂಬರೀಕರಣ ಮಾಡಿರುವುದನ್ನು ಪರಿಶೀಲಿಸಿದ ವೇಳೆ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಿಯಾಗಿ ಹೋಗಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದರು. ಈ ಸಂಬಂಧ ಡಾಂಬರೀಕರಣ ಮಾಡುವ ಮುಂಚೆಯೇ ರಸ್ತೆಯನ್ನು ಪರಿಶೀಲಿಸಿಕೊಂಡು ಸರಿಯಾದ ಅನುಕ್ರಮದಲ್ಲಿ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.