ಕೋರೊನಾ ವೈರಸ್ ಪೀಡಿತ ರೋಗಿಗಳು ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಿಲ್ಲ. ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಕೋವಿಡ್ -19 ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಿದೆ.ಸರಕಾರಿ ನೋಡಲ್ ಅಧಿಕಾರಿ ಅಥವಾ ಜಿಲ್ಲಾ ಆರೋಗ್ಯಾಧಿಕಾರಿ ಶಿಫಾರಸ್ಸು ಮಾಡಿದರೆ ಮಾತ್ರ ಕೊರೊನಾ ವೈರಸ್ ಪೀಡಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು.ಕೊರೊನಾ ತಡೆಗೆ ಸರಕಾರ ವ್ಯಾಪಕ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.