ಕೊರೊನಾ ಸೈನಿಕರು ಮನಮುಟ್ಟುವ ಕೆಲಸ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್ (ಸೈನಿಕರು) ಮಾನವೀಯತೆ ಮೆರೆದಿದ್ದಾರೆ. ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ತುರ್ತಾಗಿ ಬೇಕಾಗಿದ್ದ ಮಾತ್ರೆಗೆ ಸಹಾಯ ಹಸ್ತ ನೀಡಿದ್ದಾರೆ.ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದ ಶಿವಶರಣ ಎಂಬ ರೋಗಿಗೆ ಪ್ರತಿ ತಿಂಗಳು ಸೇವಿಸಬೇಕಾದ ಮಾತ್ರೆಗಳನ್ನು ತಮ್ಮ ಸ್ವಂತ ವಾಹನದಲ್ಲಿ ಕಲಬುರಗಿಯಿಂದ ಹುಮನಾಬಾದ್