ಬೆಂಗಳೂರು- ಬಿಜೆಪಿ ವಿರುದ್ಧ ಕಾಂಗ್ರೆಸ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದನ್ನು ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್, 'ವ್ಯಕ್ತಿಗೆ ಮಾನ ಎಷ್ಟು ಮುಖ್ಯವೋ ರಾಜಕೀಯ ಪಕ್ಷಗಳಿಗೂ ಅಷ್ಟೇ ಮುಖ್ಯ' ಎಂಬ ಮಹತ್ವದ ತೀರ್ಪು ಪ್ರಕಟಿಸಿದೆ.ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ'ದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ವಜಾಗೊಳಿಸಿದ್ದಾರೆ.ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 499 ಮತ್ತು 500ರಲ್ಲಿ 'ಯಾರೇ ಇರಲಿ' ಎಂಬ ಪದವು ಸೂಚ್ಯವಾಗಿ ಸಂಘವನ್ನೂ ವ್ಯಕ್ತಿ ಎಂದೇ ವಿಶಾಲ ಅರ್ಥದಲ್ಲಿ ಒಳಗೆಳೆದುಕೊಂಡು ಗಮನಿಸುತ್ತದೆ.